ಗರಿಯಾಬಂದ್: ಇತ್ತೀಚೆಗೆ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದ ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಪ್ರದೇಶದಲ್ಲಿ ಮತ್ತಿಬ್ಬರು ನಕ್ಸಲರ ಮೃತದೇವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇದರೊಂದಿಗೆ ಕಾರ್ಯಾಚರಣೆಯಲ್ಲಿ ಹತರಾದ ನಕ್ಸಲರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ಹೇಳಿದರು.
ಸಿಪಿಐನ ಪ್ರಮುಖ ನಕ್ಸಲ್ ನಾಯಕ ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದರು.
ಕಾರ್ಯಾಚರಣೆ ಸಂದರ್ಭದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.




