ನವದೆಹಲಿ: ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೃಷ್ಣನ್ ವಿನೋದ್ ಚಂದ್ರನ್ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಸುಪ್ರೀಂQ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು, ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿನೋದ್ ಚಂದ್ರನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ವಿನೋದ್ ಚಂದ್ರನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳ ಸಮಿತಿಯು (ಕೊಲಿಜಿಯಂ) ಜನವರಿ 7ರಂದು ಶಿಫಾರಸು ಮಾಡಿತ್ತು. ಇದಕ್ಕೆ ಕೇಂದ್ರ ಸರ್ಕಾರವು ಜನವರಿ 13ರಂದು ಅನುಮೋದನೆ ನೀಡಿತ್ತು.
ವಿನೋದ್ ಚಂದ್ರನ್ ಅವರು ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ 2011ರಲ್ಲಿ ನೇಮಕ ಆಗಿದ್ದರು. 2023ರ ಮಾರ್ಚ್‌ನಲ್ಲಿ ಅವರನ್ನು ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು.
ವಿನೋದ್ ಚಂದ್ರನ್ ಅವರ ಪದಗ್ರಹಣದೊಂದಿಗೆ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿದೆ.





