ಕಾಸರಗೋಡು: ಪೊವ್ವಲ್‍ನಲ್ಲಿ ಚಟುವಟಿಕೆ ನಡೆಸುತ್ತಿರುವ ಲಾಲ್ ಬಹದ್ದೂರ್ ಶಾಸ್ತ್ರಿ(ಎಲ್.ಬಿ.ಎಸ್)ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆಯಲಿದೆ. ಆಸಕ್ತ ಉದ್ಯೋಗಾರ್ಥಿಗಳು ಎಲ್ಲಾ ಮೂಲ ಪ್ರಮಾಣಪತ್ರಗಳು ಹಾಗೂ ಬಯೋಡಾಟಾ ಸಹಿತ ಜ. 29 ರಂದು ಬೆಳಗ್ಗೆ 10.30 ಕ್ಕೆ ಕಾಲೇಜಿನಲ್ಲಿ ನಡೆಯುವ ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ಹಾಜರಾಗಬೇಕು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್‍ನಲ್ಲಿ ಬಿ.ಟೆಕ್, ಎಂ.ಟೆಕ್ ಅರ್ಹತೆಯಾಗಿದೆ. www.lbscek.ac.in ವೆಬ್ ಸೈಟ್, 9745306534ರಿಂದ ಹೆಚ್ಚಿನ ಮಾಹಿತಿ ಲಭಿಸಬಹುದು.

