HEALTH TIPS

ಯಕ್ಷಗಾನ ಹಾಗೂ ಸಾಹಿತ್ಯಗಳಿಗೆ ಸಿರಿ ಬಾಗಿಲು ಪ್ರತಿಷ್ಠಾನದ ಕೊಡಗೆ ಗಣನೀಯ : ಡಾ.ಪುರುಷೋತ್ತಮ ಬಿಳಿಮಲೆ

ಮಧೂರು: ಕನ್ನಡ ಸಾಹಿತ್ಯ-ಸಂಸ್ಕøತಿ-ಕಲೆ ಯಕ್ಷಗಾನ ಇತ್ಯಾದಿಗಳ ಉಳಿಸಿ ಬೆಳೆಸುವಲ್ಲಿ ಸರ್ಕಾರೇತರ ಸಂಘಸಂಸ್ಥೆಗಳ ಕೊಡುಗೆಗಳು ಅಪಾರವಾಗಿದೆ ಎಂದು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು. 

ಅವರು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದಲ್ಲಿ ಇತ್ತೀಚೆಗೆ ನಡೆದ ಸಂಸ್ಕøತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ ಶುಭ ಹಾರೈಸಿದರು. 

ಗಡಿನಾಡು ಕಾಸರಗೋಡಿನಲ್ಲಿ ಯಕ್ಷಗಾನ ಹಾಗೂ ಸಾಹಿತ್ಯಕ್ಕಾಗಿ ಸಿರಿಬಾಗಿಲು ಪ್ರತಿಷ್ಠಾನವು ನೀಡುತ್ತಿರುವ ಕೊಡುಗೆಗಳು ಗಣನೀಯವಾದದು. ಧರ್ಮಸ್ಥಳ  ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಮೇಳದ ಪ್ರಧಾನ ಭಾಗವತರಾದ ರಾಮಕೃಷ್ಣ ಮಯ್ಯ ಅವರ ಸಾಧನೆ ಮೆಚ್ಚುವಂತಹದ್ದು. ಅವರ ಯೋಜನೆಗೆ ಸಹಕರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ. ಆದುದರಿಂದ ಮುಂದಿನ ದಿನಗಳಲ್ಲಿ ಪ್ರತಿಷ್ಠಾನಕ್ಕೆ ಯಾವುದಾದರೂ ಕಂಪೆನಿಗಳ ಸಿ.ಎಸ್.ಆರ್.ಫಂಡ್ ಒದಗಿಸಿ ಪ್ರತಿಷ್ಠಾನದ ಚಟುವಟಿಕೆಯನ್ನು ಇನ್ನು ಹೆಚ್ಚು ನಡೆಯುವಂತಾಗಲು, ಪ್ರತಿಷ್ಠಾನದ ಎಲ್ಲಾ ಯೋಜನೆಗಳು ಕಾರ್ಯಗವಾಗುವಂತಾಗಲು ಸಹಕರಿಸುವುದಾಗಿ ಹೇಳಿದರು. ಮುಂದಿನ ಪೀಳಿಗೆಗೆ ಈ ಯೋಜನೆಗಳು ಹಸ್ತಾಂತರವಾಗಿ ಕಲೆ ಸಂಸ್ಕøತಿ ಯಕ್ಷಗಾನ ಉಳಿದು ಬೆಳೆಯಬೇಕು. ಎಲ್ಲರೂ   ಸಿರಿಬಾಗಿಲು ಪ್ರತಿಷ್ಠಾನಕ್ಕೆ ಸಹಕರಿಸೋಣ, ಜೊತೆಯಾಗೋಣ ಎಂದು ಶುಭ ಹಾರೈಸಿದರು.

ಅತಿಥಿಗಳಾಗಿ ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ, ಗಮಕ ಕಲಾ ಪರಿಷತ್ತಿನ ಅಧ್ಯಕ್ಷ  ತೆಕ್ಕೇಕೆರೆ ಶಂಕರ ನಾರಾಯಣ ಭಟ್ ಮುಂತಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಲು ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿ, ಗೌರವಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries