ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಪೋರ್ ಪ್ರದೇಶದಲ್ಲಿ ಶಂಕಿತ ಉಗ್ರರ ಅಡಗುತಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ.
ಆಗ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಲೂರ ಗುಜ್ಜರ್‌ಪತಿಯಲ್ಲಿ ಉಗ್ರರು ಅಡಗಿರಬಹುದು ಎಂಬ ಮಾಹಿತಿ ಆಧರಿಸಿ ಭಾನುವಾರ ರಾತ್ರಿ ಸೇನಾ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದರು ಎಂದು ವರದಿಯಾಗಿದೆ.
ಈಚೆಗೆ ಸೋಪೋರ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು.




