ಕಾಸರಗೋಡು: ಅನಧಿಕೃತ ಟ್ಯಾಕ್ಸಿ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇರಳ ಟ್ಯಾಕ್ಸಿ ಚಾಲಕರ ಸಂಘಟನೆಯ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಫೆ.11ರಂದು ಬೆಳಗ್ಗೆ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್‍ಟಿಓ)ಎದುರು ಪ್ರತಿಭಟನೆ ನಡೆಯಲಿದೆ.
ಅನಧಿಕೃತ ಟ್ಯಾಕ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗದಿರುವ ಹಿನ್ನೆಲೆಯಲ್ಲಿ ಧರಣಿ ನಡೆಸಲಾಗುತ್ತಿರುವುದಾಗಿ ಸಂಘಟನೆ ಕಾರ್ಯದರ್ಶಿ ವಿನೀಶ್ ತ್ರಿಕರಿಪುರ ತಿಳಿಸಿದ್ದಾರೆ.

