HEALTH TIPS

14 ಕೋಟಿ ಜನರು NFSA ವಂಚಿತರು: ತ್ವರಿತ ಜನಗಣತಿಗೆ ಆಗ್ರಹಿಸಿದ ಸೋನಿಯಾ ಗಾಂಧಿ

ನವದೆಹಲಿ: ದೇಶದಲ್ಲಿ ಸುಮಾರು 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಲಭಿಸುವ ಪ್ರಯೋಜನೆಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಜನಗಣತಿಯನ್ನು ತ್ವರಿತವಾಗಿ ನಡೆಸಬೇಕೆಂದು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೋಮವಾರ ಆಗ್ರಹಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, 2011ರ ಜನಗಣತಿಯ ಪ್ರಕಾರವೇ ಈಗಲೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ(ಎನ್‌ಎಫ್‌ಎಸ್‌ಎ) ಫಲಾನುಭವಿಗಳನ್ನು ಗುರುತಿಸಲಾಗುತ್ತಿದ್ದು, ಇದರಿಂದ ಜನರು ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಜನರಿಗೆ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ 2013ರಲ್ಲಿ ಯುಪಿಎ ಸರ್ಕಾರ ಎನ್‌ಎಫ್‌ಎಸ್‌ಎ ಯೋಜನೆಯನ್ನು ಪರಿಚಯಿಸಿತ್ತು. ಇಂತಹ ಯೋಜನೆಗಳು ಕೋವಿಡ್‌- 19 ಬಿಕ್ಕಟ್ಟಿನ ಸಂದರ್ಭದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಿತ್ತು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

'ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ದಶಕದ ಜನಗಣತಿಯು ನಾಲ್ಕು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. 2021ಕ್ಕೆ ಜನಗಣತಿ ನಡೆಯಬೇಕಿತ್ತು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ' ಎಂದು ಕಿಡಿಕಾರಿದ್ದಾರೆ.

ತ್ವರಿತವಾಗಿ ಜನಗಣತಿಯನ್ನು ನಡೆಸಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಂಚಿತರಾಗಿರುವವರನ್ನು ಈ ಯೋಜನೆಯ ಫಲಾನುಭವಿಗಳನ್ನಾಗಿ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಸೋನಿಯಾ ಆಗ್ರಹಿಸಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಆಹಾರ ಧಾನ್ಯಗಳ ವಿತರಣೆಯ ಅವಧಿಯನ್ನು 2024ರ ಜನವರಿ1ರಿಂದ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries