ಬದಿಯಡ್ಕ: ಹೊಸಪೇಟೆಯ ಯಾಜಿ ಪ್ರಕಾಶನ ಮತ್ತು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಮಂಜೇಶ್ವರ ಆಯೋಜಿಸುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಸಂಶೋಧಕ ಡಾ. ಮೋಹನ ಕುಂಟಾರರ ವ್ಯಕ್ತಿತ್ವ ಮತ್ತು ಸಾಹಿತ್ಯದ ಬಗ್ಗೆ ಡಾ. ಸುಭಾಷ್ ಪಟ್ಟಾಜೆಯವರು ಬರೆದ 'ಬಹುಮುಖಿ' ಕೃತಿ ಫೆ.17 ರಂದು ಅಪರಾಹ್ನ 2 ಕ್ಕೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಕಾಲೇಜಿನ ಪ್ರಾಂಶುಪಾಲ ಡಾ. ಮಹಮ್ಮದಾಲಿ ಅವರ ಅಧ್ಯಕ್ಷತೆಯಲ್ಲಿ, ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ವಿ. ಪರಮಶಿವಮೂರ್ತಿಯವರು ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಹಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆಯವರು ಕೃತಿ ವಿಮರ್ಶೆ ಮಾಡಲಿದ್ದಾರೆ.




