ಪುಣೆ: ಮಹಾರಾಷ್ಟ್ರದ ಇಬ್ಬರಲ್ಲಿ ಶಂಕಿತ 'ಗೀಲನ್ ಬಾರೆ'(ಜಿಬಿಎಸ್) ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 205ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೃಢಪಡಿಸಿದ ಜಿಬಿಎಸ್ ಪ್ರಕರಣಗಳು 177 ಆಗಿದೆ. ಈ ಪೈಕಿ 20 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ. ಜಿಬಿಎಸ್ ಸೋಂಕಿನ ಹೆಚ್ಚಿನ ಪ್ರಕರಣಗಳು ಪುಣೆ ನಗರದಲ್ಲಿ ವರದಿಯಾಗಿವೆ.
ಜಿಬಿಎಸ್ ಎಂಬುದು, ರೋಗಿಯ ಪ್ರತಿಕಾಯ ಸಾಮರ್ಥ್ಯವನ್ನು ಕುಗ್ಗಿಸುವ ಬ್ಯಾಕ್ಟೀರಿಯಾ ಹಾಗೂ ವೈರಲ್ ಸೋಂಕಿನಿಂದ ಬರುವ ನರ ಸಂಬಂಧಿ ಅನಾರೋಗ್ಯವಾಗಿದೆ. ಇದು ಅಪರೂಪದ ಕಾಯಿಲೆಯಾಗಿದ್ದು, ದೇಹವು ಹಠಾತ್ತನೆ ಮರಗಟ್ಟುವಂತೆ ಮಾಡಿ, ಕೈ-ಕಾಲು ಹಾಗೂ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.
ಜಿಬಿಎಸ್ ಕಾಯಿಲೆ ತೀವ್ರ ಹಂತಕ್ಕೆ ತಲುಪಿದಾಗ ಪಾರ್ಶ್ವವಾಯು ಆಗುತ್ತದೆ.

