ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾ.27 ರಿಂದ ಎ.7 ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯ ಅಂಗವಾಗಿ ಕಾಸರಗೋಡು ನಗರ ಸಮಿತಿಯ ಸಭೆ ಫೆ.23 ರಂದು ಬೆಳಗ್ಗೆ 10 ಗಂಟೆಗೆ ಬ್ಯಾಂಕ್ ರಸ್ತೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಲಿದೆ. ಸಭೆಯಲ್ಲಿ ಕಾಸರಗೋಡು ನಗರ ಸಮಿತಿ ಹಾಗು ಎಲ್ಲಾ ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸುವಂತೆ ನಗರ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಕೋಟೆಕಣಿ, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಕೋಟೆಕಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






