HEALTH TIPS

ಗ್ವಾಟೆಮಾಲಾ| ಸೇತುವೆಯಿಂದ ಉರುಳಿದ ಬಸ್: 30ಕ್ಕೂ ಅಧಿಕ ಮಂದಿ ಸಾವು

ಗ್ವಾಟೆಮಾಲಾ: ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಸೋಮವಾರ ಬೆಳಿಗ್ಗೆ ಬಸ್‌ವೊಂದು ಸೇತುವೆಯಿಂದ ಉರುಳಿಬಿದ್ದು, 30ಕ್ಕೂ ಅಧಿಕ ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

75 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಸೇತುವೆಯಿಂದ ಉರುಳಿಬಿದ್ದಿದ್ದು, ಕನಿಷ್ಠ 31 ಜನ ಸಾವಿಗೀಡಾಗಿದ್ದಾರೆ.

ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ.

ಈವರೆಗೆ ಬಸ್ಸಿನಿಂದ 31 ಶವಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರದ ಅಗ್ನಿಶಾಮಕ ದಳದ ವಕ್ತಾರ ಮೈನೋರ್ ರುವಾನೋ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಹಲವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ರುವಾನೋ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries