HEALTH TIPS

ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆಗೆ ತುತ್ತಾಗಿದ್ದ 38 ರೋಗಿಗಳು ಗುಣಮುಖ

 ಜಮ್ಮು: ಜಮ್ಮು-ಕಾಶ್ಮೀರ ರಜೌರಿ ಜಿಲ್ಲೆಯ ಬಧಾಲ್ ಗ್ರಾಮದಲ್ಲಿ ನಿಗೂಢ ಕಾಯಿಲೆಗೆ ತುತ್ತಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 38 ರೋಗಿಗಳು ಪೂರ್ತಿಯಾಗಿ ಗುಣಮುಖರಾಗಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿಗೂಢ ಕಾಯಿಲೆಗೆ ತುತ್ತಾಗಿರಬಹುದಾದ 60 ಕುಟುಂಬಗಳ 363 ಮಂದಿಯನ್ನು ರಜೌರಿ ಜಿಲ್ಲೆಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ.


ಮುಖ್ಯ ಕಾರ್ಯದರ್ಶಿ ಅತಲ್ ದುಲ್ಲೊ ಅವರ ನೇತೃತ್ವದಲ್ಲಿ ಆರೋಗ್ಯ ತಜ್ಞರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಗುರುವಾರ ಸಭೆ ನಡೆದಿದೆ. ಈ ಸಭೆಯಲ್ಲಿ ಈ ಕಾಯಿಲೆಗೆ ತುತ್ತಾದ ಪ್ರತಿಯೊಂದು ಕುಟುಂಬವನ್ನು ಐಸೊಲೇಟ್ ಮಾಡಲಾಗಿದ್ದು, ಅವರಿಗೆ ಆಹಾರ ಮತ್ತು ಕುಡಿಯುವ ನೀರು ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಸೈಯದ್ ಅಬಿದ್ ರಶೀದ್ ಶಾ ತಿಳಿಸಿದರು.

ಈ ಕಾಯಿಲೆಗೆ ತುತ್ತಾದ 55 ಮಂದಿಯಲ್ಲಿ ಸಂಪೂರ್ಣವಾಗಿ ಗುಣಮುಖವಾಗಿರುವ 38 ಮಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷದ ಡಿಸೆಂಬರ್ 7ರಿಂದ ಜನವರಿ 19ರವರೆಗೆ ಈ ನಿಗೂಢ ಕಾಯಿಲೆಗೆ 17 ಮಂದಿ ಬಲಿಯಾಗಿದ್ದಾರೆ ಎಂದು ಶಾ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries