ಕಾಸರಗೋಡು: ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಹಿಂದಿ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು.
ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ ಸಮಾರಂಭ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಶೀದ್ ಪೂರಣಂ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯರಾದ ಕೆ.ಎಂ.ಹನೀಫ, ಕೆ.ಎನ್.ಸುನಿಲ್ ಕುಮಾರ್, ಸರ್ವಮಂಗಳಾರಾವ್, ಓ.ಕನಕಲತಾ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಡಿ.ವಿಮಲಾಕುಮಾರಿ ಸ್ವಾಗತಿಸಿದರು.



