HEALTH TIPS

ರಾಷ್ಟ್ರೀಯ ಹೆದ್ದಾರಿಗಳಲ್ಲಿ 'ಏಕರೂಪದ ಟೋಲ್ ನೀತಿ' ಜಾರಿಗೆ ಸರ್ಕಾರ ಚಿಂತನೆ: ನಿತಿನ್ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಾರಿಗೆ ಸಚಿವಾಲಯವು 'ಏಕರೂಪದ ಟೋಲ್ ನೀತಿ'ಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.

ಪಿಟಿಐ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಈಗ ಭಾರತದ ಹೆದ್ದಾರಿ ಮೂಲಸೌಕರ್ಯವು ಅಮೆರಿಕಕ್ಕೆ ಹೊಂದಿಕೆಯಾಗುತ್ತದೆ. 'ನಾವು ದೇಶದಾದ್ಯಂತ ಏಕರೂಪದ ಟೋಲ್ ನೀತಿಯನ್ನು ಜಾರಿಗೆ ತರಲು ಕೆಲಸ ಮಾಡುತ್ತಿದ್ದೇವೆ. ಇದು ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಪರಿಹರಿಸುತ್ತದೆ' ಎಂದು ಹೇಳಿದರು.

ಹೆಚ್ಚಿನ ಟೋಲ್ ಶುಲ್ಕಗಳು ಮತ್ತು ಕೆಟ್ಟ ರಸ್ತೆ, ಭಾರಿ ಟ್ರಾಫಿಕ್, ಗೊಂದಲಮಯ ಸಂಕೇತಗಳು ಅಥವಾ ಅಸುರಕ್ಷಿತ ಡ್ರೈವಿಂಗ್ ಅನುಭವವನ್ನು ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ ಉತ್ತರಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆ(GNSS) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೆ ತರಲು ಸಚಿವಾಲಯ ನಿರ್ಧರಿಸಿದೆ ಎಂದರು. ಸಾಮಾಜಿಕ ಮಾಧ್ಯಮದಲ್ಲಿ ಪ್ರಯಾಣಿಕರು ಮಾಡುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಇದರಲ್ಲಿ ಒಳಗೊಂಡಿರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಸದ್ಯ, ಖಾಸಗಿ ಕಾರುಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಮಾರು ಶೇ 60 ರಷ್ಟು ದಟ್ಟಣೆಯನ್ನು ಹೊಂದಿದ್ದರೆ, ಈ ವಾಹನಗಳಿಂದ ಬರುವ ಟೋಲ್ ಆದಾಯದ ಪಾಲು ಕೇವಲ ಶೇ 20-26 ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಟೋಲಿಂಗ್ ವ್ಯವಸ್ಥೆಯಡಿಯಲ್ಲಿ ಹೆಚ್ಚು ಹೆಚ್ಚು ವಿಸ್ತರಣೆಗಳಾಗಿದ್ದರೂ ಕೂಡ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಗಳು ಹೆಚ್ಚಾಗಿದೆ. ಇದು ಸಾಮಾನ್ಯವಾಗಿ ಬಳಕೆದಾರರ ಅಸಮಾಧಾನಕ್ಕೆ ಕಾರಣವಾಗಿದೆ.

2023-24ರಲ್ಲಿ ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹವು 64,809.86 ಕೋಟಿ ರೂ.ಗೆ ತಲುಪಿದೆ. ಇದು ಹಿಂದಿನ ವರ್ಷಕ್ಕಿಂತ ಶೇ 35 ರಷ್ಟು ಏರಿಕೆಯಾಗಿದೆ. 2019-20ರಲ್ಲಿ 27,503 ಕೋಟಿ ರೂಪಾಯಿ ಸಂಗ್ರಹವಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries