ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿಯನ್ನು ಕರ್ತವ್ಯದಿಂದ ತೆಗೆಯುವ ಅಧಿಕಾರವು ಸಂಸತ್ತಿಗೆ ಮಾತ್ರವೇ ಇದೆ ಎಂದು ಹೇಳಿರುವ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಯಾದವ್ ಅವರನ್ನು ಹುದ್ದೆಯಿಂದ ವಜಾಗೊಳಿಸಲು ನೀಡಿರುವ ನೋಟಿಸ್ ತಮ್ಮ ಬಳಿ ಬಾಕಿ ಇದೆ ಎಂದು ತಿಳಿಸಿದ್ದಾರೆ.
ನ್ಯಾಯಮೂರ್ತಿ ಯಾದವ್ ಅವರನ್ನು ವಜಾಗೊಳಿಸಲು ರಾಜ್ಯಸಭೆಯ 55 ಸದಸ್ಯರು ಸಭಾಪತಿಗೆ ಡಿಸೆಂಬರ್‌ನಲ್ಲಿ ನೋಟಿಸ್ ನೀಡಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ನೀಡುವಂತೆ ಧನಕರ್ ಅವರು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು.




