ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಹೇಶ್ವರ ಕ್ಷೇತ್ರದಲ್ಲಿ ನವೀಕರಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಜಾತ್ರೆ ಭಾನುವಾರ ಶ್ರೀ ಧೂಮಾವತೀ ದೈವದ ನರ್ತ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.
ಶ್ರೀ ಕ್ಷೇತ್ರದಲ್ಲಿ ಶನಿವಾರ ನಾರಂಪಾಡಿ ಗುತ್ತು ದೈವಸ್ಥಾನದಿಂದ ಧೂಮಾವತಿ ದೈವದ ಭಂಡಾರ ಆಗಮನ, ದೈವಗಳ ತಂಬಿಲ ನಡೆಯಿತು.
ಭಾನುವಾರ ಬೆಳಗ್ಗೆ ಬೆಳಗ್ಗಿನ ಪೂಜೆ, ಶ್ರೀ ಧೂಮಾವತೀ ದೈವದ ನರ್ತನ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಿತು. ಸಂಜೆ ಶ್ರೀ ಧೂಮಾವತೀ ದೈವದ ಭಂಡಾರ ನಿರ್ಗಮನದೊಂದಿಗೆ ಸಂಪನ್ನಗೊಂಡಿತು.
ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 2ರಂದು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವೂ, ಫೆಬ್ರವರಿ 11ರಿಂದ ವರ್ಷಾವಧಿ üಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಯತಿವರ್ಯರರು, ಗಣ್ಯರು ಆಗಮಿಸಿ ತೆರಳಿದ್ದಾರೆ. ಬಹಳ ಅಚ್ಚುಕಚ್ಟಾಗಿ ವಿವಿಧ ಉಪಸಮಿತಿಗಳ ನೇತೃತ್ವದಲ್ಲಿ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಆಗಮಿಸಿದ ಭಕ್ತಾದಿಗಳಿಗೆ ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿಷೇಕದ ಅಧ್ಯಕ್ಷ ನಿತ್ಯಾನಂದ ಶೆಣೈ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ತರ್ ನಾರಂಪಾಡಿ ಹಾಗೂ ಕೋಶಾಧಿಕಾರಿ ಸೀತಾರಾಮ ಕುಂಜತ್ತಾಯ ಸೇರಿದಂತೆ ಪದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.




.jpg)

