ಕಾಸರಗೋಡು: ಮುಳಿಯಾರು ಗ್ರಾಮ ಪಂಚಾಯತಿಯ ಕಾನತ್ತೂರು ಬೀಟಿಯಡ್ಕದಲ್ಲಿ ಚಿರತೆ ಕಾಣಿಸಿಕೊಂಡಿದೆ. ಅಲ್ಲಿನ ಅಂಗನವಾಡಿ ಪರಿಸರದಲ್ಲಿ ಚಿರತೆ ಕಂಡಿರುವುದಾಗಿ ಸಜಿ ತಿಳಿಸಿದ್ದಾರೆ. ಶನಿವಾರ ಮುಂಜಾನೆ 5.45 ಕ್ಕೆ ರಬ್ಬರ್ ಟ್ಯಾಪಿಂಗ್‍ಗೆ ತೆರಳುತ್ತಿದ್ದಾಗ ಚಿರತೆ ಕಂಡುಬಂದಿದೆ ಎಂದವರು ಮಾಹಿತಿ ನೀಡಿದ್ದಾರೆ.
ಮುಳಿಯಾರು, ಕಾರಡ್ಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಪಯಶ್ವಿನಿ ಹೊಳೆ ಬದಿಯ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆ ಹಾವಳಿ ತೀವ್ರಗೊಂಡಿದೆ. ಕಾನತ್ತೂರು, ಬೀಟಿಯಡ್ಕ, ಮೂಡಯಂವೀಡ್, ನೆಯ್ಯಂಗಯ, ಕೊಟ್ಟಂಗುಳಿ, ಪಾಣೂರು ಪ್ರದೇಶಗಳಲ್ಲಿ ಸಾಕು ಪ್ರಾಣಿಗಳು ನಾಪತ್ತೆಯಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದೆ.




