HEALTH TIPS

'ಪಿಎಂ- ಆಶಾ' ಮುಂದುವರಿಕೆಗೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ಅನ್ನದಾತ ಆಯ್‌ ಸಂರಕ್ಷಣಾ ಅಭಿಯಾನ (ಪಿಎಂ- ಆಶಾ) ಯೋಜನೆಯನ್ನು 2025-26ನೇ ಸಾಲಿನಲ್ಲೂ ಮುಂದುವರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಯೋಜನೆಯು ಖರೀದಿ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಗುರಿ ಹೊಂದಿದ್ದು, ರೈತರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸಲು ನಿರ್ಣಾಯಕವಾಗಿದೆ ಎಂದಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಉದ್ದು ಖರೀದಿಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಆಂಧ್ರಪ್ರದೇಶ, ಛತ್ತೀಸಗಢ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ 13.22 ಲಕ್ಷ ಟನ್‌ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣದಲ್ಲಿ ಫೆ.15ರವರೆಗೆ 15 ಲಕ್ಷ ಟನ್ ತೊಗರಿ ಖರೀದಿಸಿದ್ದು, ಈ ರಾಜ್ಯಗಳ 12,006 ರೈತರಿಗೆ ಅನುಕೂಲವಾಗಿದೆ ಎಂದಿರುವ ಚೌಹಾಣ್‌, ಇತರ ರಾಜ್ಯಗಳಲ್ಲೂ ಶೀಘ್ರದಲ್ಲೇ ಖರೀದಿ ಆರಂಭವಾಗಲಿದೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries