ಮುಳ್ಳೇರಿಯ: ಪ್ರತಿಯೊಬ್ಬರೂ ಲೋಕಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅವರು ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆದ ನವೀಕರಣ ಪುನ: ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕದಂಗವಾಗಿ ಸೋಮವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಪ್ರತಿಯೊಬ್ಬರಲ್ಲೂ ಒಳ್ಳೆಯ ಭಾವನೆ ಜಾಗೃತಿಯಾಗಬೇಕು, ಇಂತಹ ಕಾರ್ಯ ಈ ಪರಿಸರದಲ್ಲಿ ನಡೆಯುತ್ತಿದೆ. ಭಗವಂತನ ಹೆಸರಲ್ಲಿ ಸಮಾಜದ ಹಿತ ಕಾರ್ಯವನ್ನು ಮಾಡಬೇಕು. ಒಳ್ಳೆಯ ಸಂಸ್ಕಾರ ಲಭಿಸುವ ಶ್ರದ್ಧಾ ಕೇಂದ್ರವಾಗಿ ಕ್ಷೇತ್ರವು ನಮ್ಮ ಸಮಾಜಕ್ಕೆ ಮಾರ್ಗದರ್ಶನ ನೀಡುವಂತಾಗಬೇಕು. ಇಲ್ಲಿ ಭಾರತೀಯ ಸಂಸ್ಕøತಿಯ ಪ್ರತಿಬಿಂಬವನ್ನು ಕಾಣಬಹುದು. ಒಂದು ಐಕ್ಯತೆಯ ಸಂದೇಶವನ್ನು ಕಾಣಬಹುದಾಗಿದೆ.
ಅತ್ಯಂತ ಶ್ರದ್ಧೆಯಿಂದ ಭಕ್ತಿಯಿಂದ ನಿರಂತರ ಸ್ಮರಣೆಯನ್ನು ಸಮರ್ಪಿಸಿಕೊಂಡು ಈ ಪುಣ್ಯ ಕಾರ್ಯದಲ್ಲಿ ಸಹಯೋಗ ನೀಡುವ ಮೂಲಕ ಬದುಕನ್ನು ಸಾರ್ಥಕತೆಯನ್ನು ಹೊಂದಲಿ ಎಂದು ಸ್ವಾಮೀಜಿ ಆಶೀರ್ವಚ ನೀಡಿದರು.
ಉಮಾಮಹೇಶ್ವರ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಬ್ರಹ್ಮಕಲಶಾಭಿμÉೀಕದ ಅಧ್ಯಕ್ಷ ನಿತ್ಯಾನಂದ ಶೆಣೈ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆರ್‍ಎಸ್‍ಎಸ್ ಅಖಿಲಭಾರತೀಯ ಕುಟುಂಬ ಪ್ರಮೋಧನ್ ಕಾರ್ಯಕರ್ತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಮುಂಡೋಳು ಶ್ರೀ ಮಹಾವಿಷ್ಣು ಶ್ರೀಶಾಸ್ತಾರ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಘುರಾಮ ಬಲ್ಲಾಳ್, ಸಾಮಾಜಿಕ ಕಾರ್ಯಕರ್ತ ನ್ಯಾಯವಾದಿ ಕೆ.ಶ್ರೀಕಾಂತ್, ಶ್ರೀಕೃಷ್ಣ ಹಾರ್ಡ್‍ವೇರ್ ಇದರ ಮಾಲಕ ಸುರೇಶ್, ಖ್ಯಾತ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮುಂತಾದವರು ಮಾತನಾಡಿದರು.
ಸಮಾರಂಭದಲ್ಲಿ ನಾರಂಪಾಡಿ ಗುತ್ತು ದೈವಸ್ಥಾನದ ಬಾಲಕೃಷ್ಣ ರೈ, ಶ್ರೀ ಕ್ಷೇತ್ರ ಬ್ರಹ್ಮಕಲಶಾಭಿμÉೀಕ ಸಮಿತಿ ಉಪಾಧ್ಯಕ್ಷ ವಾಸುದೇವ ಭಟ್ ಉಪ್ಪಂಗಳ, ಬ್ರಹ್ಮಕಲಶಾಭಿμÉೀಕ ಉಪಾಧ್ಯಕ್ಷ ಶಂಕರನಾರಾಯಣ ಮಯ್ಯ ಬದಿಯಡ್ಕ, ಬ್ರಹ್ಮಕಲಶಾಭಿμÉೀಕ ಉಪಾಧ್ಯಕ್ಷ ಪದ್ಮನಾಭ ಭಟ್ ಕೊರೆಕ್ಕಾನ, ನೆಕ್ರಾಜೆ ಶ್ರೀ ಸಂತಾನಗೋಪಾಲಕೃಷ್ಣ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ಗಣೇಶ ವತ್ಸ ನೆಕ್ರಾಜೆ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶಾಭಿμÉೀಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ಟರ್ ನಾರಂಪಾಡಿ, ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ ಮತ್ತಿತರರು ಉಪಸ್ಥಿತರಿದ್ದರು.
ಆರಂಭದಲ್ಲಿ ಆರಂಭದಲ್ಲಿ ಉದಯ ನಾರಂಪಾಡಿ ಪ್ರಾರ್ಥನೆ ಹಾಡಿದರು. ಬ್ರಹ್ಮಕಲಶಾಭಿμÉೀಕ ಕೋಶಾಽಕಾರಿ ಸೀತಾರಾಮ ಕುಂಜತ್ತಾಯ ಸ್ವಾಗತಿಸಿ, ಬ್ರಹ್ಮಕಲಶಾಭಿμÉೀಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ಟರ್ ನಾರಂಪಾಡಿ ವಂದಿಸಿದರು. ಹರ್ಷ ಮಾಸ್ಟರ್ ಬೆಳಿಂಜ ನಿರ್ವಹಿಸಿದರು.
ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿμÉೀಕದಂಗವಾಗಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಸಂಗೀತ ವಿದ್ಯಾಪೀಠ ವೀಣಾವಾದಿನಿ ಯ ಯೋಗೀಶ ಶರ್ಮಾ ಬಳ್ಳಪದವು ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ರಾತ್ರಿ ಮಾವಿನಕಟ್ಟೆ ಶ್ರೀ ಅಯ್ಯಪ್ಪ ಸ್ವಾಮೀ ಯಕ್ಷಗಾನ ಕಲಾ ಸಂಘದಿಂದ ದಕ್ಷಯಜ್ಞ-ಗಿರಿಜಾ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತ್ತು.
ಶ್ರೀ ನಾರಂಪಾಡಿ ಉಮಾಮಹೇಶ್ವರ ಕ್ಷೇತ್ರದ ವμರ್Áವಧಿ ಉತ್ಸವವು -.ಇಂದಿನಿಂದ 16ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

.jpg)
.jpg)
.jpg)

