ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ವತಿಯಿಂದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಮಾರ್ಚ್ 1ರಿಂದ 9ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದವನ್ನು ಪಡೆದುಕೊಳ್ಳಲಾಯಿತು.
ಕಿಳಿಂಗಾರು ಸಾಯಿಮಂದಿರದಲ್ಲಿ ಮೊಕ್ಕಾ ಹೂಡಿದ್ದ ಶ್ರೀಗಳ ಭೇಟಿಯ ಸಂದರ್ಭ ಕಾರ್ಮಾರು ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಸೇವಾಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ, ಗಣೇಶ್ ಪಟ್ಟಾಜೆ ಉಪಸ್ಥಿತರಿದ್ದು, ಮುಂದಿನ ದಿನಗಳಲ್ಲಿ ಕಾರ್ಮಾರು ಕ್ಷೇತ್ರಕ್ಕೆ ಆಗಮಿಸುವಂತೆ ಭಿನ್ನವಿಸಿಕೊಂಡರು. ಶ್ರೀದೇವರ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿ ಎಂದು ಶ್ರೀಗಳು ಹಾರೈಸಿ, ಮಂತ್ರಾಕ್ಷತೆಯನ್ನಿತ್ತರು.





