ನವದೆಹಲಿ: ಯಂತ್ರೋಪಕರಣ ಕಳ್ಳತನ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಹಾಗೂ ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ರಾಜೇಶ್ ಬಿಂದಾಲ್ ಅವರಿದ್ದ ಪೀಠವು ಜಾಮೀನು ನೀಡಿ ಆದೇಶ ಹೊರಡಿಸಿದೆ.
ತಮಗೆ ಜಾಮೀನು ನೀಡಲು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಜಂ ಅವರು ಸುಪ್ರೀಂ ಮೆಟ್ಟಿಲೇರಿದ್ದರು.
ರಾಂಪುರ ಜಿಲ್ಲೆಯ ನಗರ ಪಾಲಿಕೆ ಖರೀದಿಸಿದ್ದ ರಸ್ತೆ ಸ್ವಚ್ಛತಾ ಯಂತ್ರೋಪಕರಣಗಳನ್ನು ಕಳ್ಳತನ ಮಾಡಿದ್ದಾರೆ ಎಂಬ ಆರೋಪದಡಿ ಅಜಂ, ಪುತ್ರ ಹಾಗೂ ಇತರ ಐವರ ವಿರುದ್ಧ 2022ರಲ್ಲಿ ಪ್ರಕರಣ ದಾಖಲಾಗಿತ್ತು.




