ಜಮ್ಮು (PTI): ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರು ಸರ್ಕಾರಿ ಸಿಬ್ಬಂದಿಯನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಸೇವೆಯಿಂದ ವಜಾ ಮಾಡಿದ್ದಾರೆ.
ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ತನಿಖೆಯಲ್ಲಿ ಮೂವರು ಸರ್ಕಾರಿ ನೌಕರರು ಭಯೋತ್ಪಾದಕ ನಂಟು ಹೊಂದಿರುವುದು ಸ್ಪಷ್ಟವಾಗಿತ್ತು. ಹೀಗಾಗಿ ಸಂವಿಧಾನದ ಅನುಚ್ಛೇದ 311(2)(ಸಿ)ಯನ್ನು ಅನ್ವಯಿಸಿ, ಲೆಫ್ಟಿನೆಂಟ್ ಗವರ್ನರ್ ಮೂವರನ್ನೂ ಸೇವೆಯಿಂದ ವಜಾ ಮಾಡಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ಕೇಂದ್ರಾಡಳಿತ ಪ್ರದೇಶದ 70ಕ್ಕೂ ಹೆಚ್ಚು ಸರ್ಕಾರಿ ಸಿಬ್ಬಂದಿಯನ್ನು ಭಯೋತ್ಪಾಕ ನಂಟಿನ ಕಾರಣಕ್ಕೆ ವಜಾ ಮಾಡಿದ್ದಾರೆ.






