ಲಖನೌ; ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಗಾಳಿಪಟ ದಾರ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬರೇಲಿ ಜಿಲ್ಲೆಯ ಕ್ವಿಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಾಲೀಕ ಅತಿಕ್ ರಜಾ ಖಾನ್ (45), ಕಾರ್ಮಿಕರಾದ ಫೈಜಾನ್ (25) ಮತ್ತು ಸರ್ತಾಜ್ (20) ಎಂದು ಗುರುತಿಸಲಾಗಿದೆ.
ಮುಂಬೈ: 2020ರಿಂದ ಅಕ್ರಮ ವಾಸ್ತವ್ಯ; ಏಳು ಬಾಂಗ್ಲಾದೇಶಿ ಪ್ರಜೆಗಳ ಬಂಧನಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ; ತಜ್ಞರನ್ನು ಒಳಗೊಂಡ ಸಮಿತಿ ರಚನೆ: ಸಿದ್ದರಾಮಯ್ಯ
ಗಾಳಿಪಟ ದಾರ ತಯಾರಿಸುವ ಪ್ರಕ್ರಿಯೆಯಲ್ಲಿ ಸಲ್ಫರ್, ಪೊಟ್ಯಾಶ್ ಮತ್ತು ಗಾಜು ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಫೋಟದ ತೀವ್ರತೆ ಪ್ರಬಲವಾಗಿತ್ತು. ಹೀಗಾಗಿ ನಾವು ಆತಂಕಕ್ಕೆ ಒಳಗಾಗಿದ್ದೆವು ಎಂದು ಸ್ಥಳೀಯರು ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.



