ಮುಳ್ಳೇರಿಯ: ಪ್ರಸ್ತುತ ವಿದ್ಯಾಶ್ರೀ ಶಿಕ್ಷಣ ಕೇಂದ್ರ ಮುಳ್ಳೇರಿಯ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಶ್ರೇಯಸ್, ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಚಿಕಿತ್ಸೆಗೆ ಸುಮಾರು 15 ರಿಂದ 20 ಲಕ್ಷದ ವರೆಗೆ ಖರ್ಚನ್ನು ಅಂದಾಜಿಸಲಾಗಿದೆ. ಈ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳ ಮೂಲಕ ಪಾಲಕರಿಂದ ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳಿಂದ ಸಂಗ್ರಹಿಸಿದ 77,700 ರೂ. ಮೊತ್ತವನ್ನು ಶಾಲೆಯ ಪ್ರಾರ್ಥನಾ ಸಭೆಯಲ್ಲಿ ವಿದ್ಯಾರ್ಥಿಯ ತಂದೆ ಶರತ್ ಪೆರಿಯಡ್ಕ ಇವರಿಗೆ ಶಾಲಾ ಕ್ಷೇಮ ಸಮಿತಿ ಅಧ್ಯಕ್ಷ ಸೂರ್ಯನಾರಾಯಣ ಭಟ್ ಮತ್ತು ಸಮಿತಿ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಸಮಿತಿ ಸದಸ್ಯರು, ಅಧ್ಯಾಪಕವೃಂದ, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.




.jpg)

