ಕಾಸರಗೋಡು: ಅಂತಾರಾಷ್ಟ್ರೀಯ ಅಪಸ್ಮಾರ ದಿನಾಚರಣೆ ಮತ್ತು ಜಾಗೃತಿ ವಿಚಾರ ಸಂಕಿರಣದ ಜಿಲ್ಲಾ ಮಟ್ಟದ ಉದ್ಘಾಟನೆ ನೀಲೇಶ್ವರದ ತಾಲೂಕು ಆಸ್ಪತ್ರೆಯ ಸಮ್ಮೇಳನ ಸಭಾಂಗಣದಲ್ಲಿ ಜರುಗಿತು. ಕಾಸರಗೋಡು ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ) ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಿತು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನೀಲೇಶ್ವರ ನಗರಸಭಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಟಿ.ಪಿ.ಲತಾ ಉದ್ಘಾಟಿಸಿದರು. ನೀಲೇಶ್ವರ ನಗರಸಭಾ ಸದಸ್ಯೆ ವಿ.ವಿ.ಶ್ರೀಜಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲ ಸಹಾಯಕ ವೈದ್ಯಾಧಿಕಾರಿ ಡಾ.ಸಂತೋಷ್ ಕೆ ದಿನಾಚರಣೆಯ ಸಂದೇಶ ನೀಡಿದರು.
ಜಿಲ್ಲಾ ಮಾಸ್ ಮೀಡಿಯಾ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್, ಅಪರ ಜಿಲ್ಲಾ ಮಾಸ್ ಮೀಡಿಯಾ ಅಧಿಕಾರಿ ಕೃಷ್ಣದಾಸ್ ಮತ್ತು ಪಿಎಚ್‍ಎನ್ ಸೂಸನ್ ಫಿಲಿಪ್ ಉಪಸ್ಥಿತರಿದ್ದರು. ನೀಲೇಶ್ವರ ತಾಲೂಕು ಆಸ್ಪತ್ರೆ ಅಧೀಕ್ಷಕ ಡಾ. ಮನೋಜ್ ಎ.ಟಿ ಸ್ವಾಗತಿಸಿದರು. ಜಿಲ್ಲಾ ಸಹಾಯಕ ಮಾಸ್‍ಮೀಡಿಯಾ ಅಧಿಕಾರಿ ಸಯನಾ ಎಸ್ ವಂದಿಸಿದರು.
ಅಪಸ್ಮಾರ ಮೆದುಳಿನ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಕಾಯಿಲೆಯಾಗಿದ್ದು ಅದು ಮೆದುಳಿನ ಅನೇಕ ಭಾಗದ ಚಟುವಟಿಕೆಗಳ ಮೇಲೆ ಸಮಸ್ಯೆ ತಂದೊಡ್ಡುವ ಸಾಧ್ಯತೆಯಿದೆ. ಇದು ವಿವಿಧ ವಯಸ್ಸಿನ ಜನರ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರಲು ಸಾಧ್ಯತೆಯಿದ್ದು, ವಿವಿಧ ರೀತಿಯಲ್ಲಿ ಇದು ಕಾಣಿಸಿಕೊಳ್ಳಲು ಸಾಧ್ಯವಿದೆ ಎಂಬುದಾಗಿ ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ರಾಮದಾಸ್ ಎ.ವಿ ಮಾಹಿತಿ ನೀಡಿದರು.






