ಶ್ರೀನಗರ: ರಜೆ ಮುಗಿಸಿಕೊಂಡು ಮನೆಯಿಂದ ಹೊರಟು ಕರ್ತವ್ಯಕ್ಕೆ ಹಾಜರಾಗಲು ಬರುತ್ತಿದ್ದ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಫಲ್ ಮ್ಯಾನ್ ಅಬೀದ್ ಭಟ್ ಎಂಬವರು ಅನಂತ್ ನಾಗ್ ಜಿಲ್ಲೆಯ ಚಿತ್ತೇರ್‌ಗುಲ್‌ನ ತನ್ನ ನಿವಾಸದಿಂದ ಹೊರಟು ರಂಗ್ರೇತ್‌ನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಿಗ್ಗೆವರೆಗೂ ಯೋಧ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.




