ಕಾಸರಗೋಡು: ಬದಲಾವಣೆಗೆ ಹೊಂದಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕನಸುಕಾಣಲು ಶಿಕ್ಷಕರು ಪ್ರೇರಣೆ ನೀಡಬೇಕು, ಜತೆಗೆ ಅವುಗಳನ್ನು ನನಸಾಗಿಸಲು ವಿದ್ಯಾರ್ಥಿಗಳು ಪಣತೊಡಬೇಕು ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ಅವರು ಪುತ್ತಿಗೆ ಮುಹಿಮ್ಮತ್‍ನಲ್ಲಿ ಸೈಯದ್ ತ್ವಾಹಿರುಲ್ ಅಹ್ದಲ್ ತಙಳ್
ಅವರ 19ನೇ ಉರುಸ್ ಮುಬಾರಕ್ ಹಾಗೂ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮತ್ತು ಮಾಹಿತಿ ತಂತ್ರಜ್ಞಾನದ ಜಗತ್ತಿನಲ್ಲಿ ಹೊಸ ಕನಸುಗಳನ್ನು ಕಾಣಲು ವಿದ್ಯಾರ್ಥಿಗಳು ಸಿದ್ಧರಾಗಿರಬೇಕು. 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಸ್ತವ್ಯದೊಂದಿಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಕೇರಳ ಹಾಗೂ ಕರ್ನಾಟಕದ ನೂರಾರು ಮಂದಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮುಹಿಮ್ಮತ್ ಸಂಸ್ಥೆ ನೀಡುತ್ತಿರುವ ಸೇವೆ ಶ್ಲಾಘನೀಯ ಎಂದು ತಿಳಿಸಿದರು. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮುಖ್ಯ ಭಾಷಣ ಮಾಡಿದರು.






