ಕಾಸರಗೋಡು: ಜಿಲ್ಲಾ ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆ ಅಡ್ಕತ್ತಬೈಲ್‍ನ ಉಡುಪಿ ಗಾರ್ಡನ್ ಮಧುರಾ ಸಭಾಂಗಣದಲ್ಲಿ ಜರುಗಿತು.ಹೋರಾಟ ಸಮಿತಿ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕನ್ನಡಪರ ಸಂಘಟನೆಗಳನ್ನು ಒಟ್ಟುಸೇರಿಸಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪ್ರಾದೇಶಿಕ ಮಟ್ಟದಲ್ಲಿ ಕನ್ನಡಿಗರೆಲ್ಲರನ್ನೂ ಒಟ್ಟುಸೇರಿಸಿ ಮುಂದಿನ ಹೋರಾಟದ ರೂಪುರೇಷೆ ತಯಾರಿಸಲು ತೀರ್ಮಾನಿಸಲಾಯಿತು.
ಈ ಸಂದರ್ಭ ಪ್ರತಿ ಪಂಚಾಯಿತಿ ಮಟ್ಟದಲ್ಲಿ ಸಂಚಾಲಕರನ್ನು ನೇಮಿಸಲಾಯಿತು. ರವೀಶ ತಂತ್ರಿ ಕುಂಟಾರು. ರಾಮ ಪ್ರಸಾದ್ ಕಾಸರಗೋಡು, ಟಿ. ಶಂಕರನಾರಾಯಣ ಭಟ್, ಪ್ರದೀಪ್ ಶೆಟ್ಟಿ, ಟಿ.ಡಿ ಸದಾಶಿವ ರಾವ್, ಮಹೇಶ್, ಗುರುಪ್ರಸಾದ್ ಕೋಟೆಕಣಿ, ಡಾ. ಬೇ.ಸಿ ಗೋಪಾಲಕೃಷ್ಣ ಭಟ್, ನಾರಾಯಣ ಭಟ್ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ ಸ್ವಾಗತಿಸಿದರು. ಉಪಾಧ್ಯಕ್ಷ ಸತೀಶ್ ಕುಮಾರ್ ವಂದಿಸಿದರು.



