ಕಾಸರಗೋಡು: ವೃತ್ತಿ ಹಾಗೂ ಪ್ರವೃತ್ತಿ ಎರಡರಲ್ಲೂ ಯಶಸ್ಸು ಸಾಧಿಸಿದಾತ ಬದುಕಿನಲ್ಲೂ ಉನ್ನತಿಯೆಡೆಗೆ ಸಾಗಲು ಸಾಧ್ಯ ಎಂಬುದಾಗಿ ಕನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ತಿಳಿಸಿದ್ದಾರೆ.
ಅವರು ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಸಮ್ಮೇಳನದಲ್ಲಿ ವಿಶೇಷ ಪ್ರಶಸ್ತಿಗೆ ಭಾಜನರಾದ ಕಾಸರಗೋಡಿನ ಹಿರಿಯ ಪತ್ರಕರ್ತ ವೀಜಿ ಕಾಸರಗೋಡು ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ(ರಿ)ಕಾಸರಗೋಡು ವತಿಯಿಂದ ಕಾಸರಗೋಡು ಅಡ್ಕತ್ತಬೈಲು ಉಡುಪಿ ಗಾರ್ಡನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಬಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಕಾಡಮಿ ಸಂಸ್ಥಾಪಕ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು ವೀಜಿ ಕಾಸರಗೋಡು ಅವರನ್ನು ಗೌರವಿಸಿದರು. ಕಾಸರಗೋಡು ನಗರಸಭಾ ಸದಸ್ಯ ವರಪ್ರಸಾದ್ ಕೋಟೆಕಣಿ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ, ಉದ್ಯಮಿಗಳಾದ ಅರಿಬೈಲು ಗೋಪಾಲ ಶೆಟ್ಟಿ, ಶ್ರೀಧರ ಶೆಟ್ಟಿ ಮುಟ್ಟಂ, ಡಾ. ಸತೀಶ್ ಪುಣಿಂಚಿತ್ತಾಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಪ್ರಧಾನ ಕಾರ್ಯದರ್ಶಿ ಗಂಗಾಧರ ಯಾದವ್ ಮೊದಲಾದವರು ಉಪಸ್ಥಿತರಿದ್ದರು. ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಅದ್ಯಕ್ಷ ಚನಿಯಪ್ಪ ನಾಯ್ಕ್ ಸ್ವಾಗತಿಸಿದರು. ಪ್ರೊ. ಎ.ಶ್ರೀನಾಥ್ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತೆ ವಿದ್ಯಾಗಣೇಶ್ ವಂದಿಸಿದರು.





