ಬದಿಯಡ್ಕ: ಬದಿಯಡ್ಕವನ್ನು ಸಾಂಸ್ಕøತಿಕ ನಗರಿಯಾಗಿ ರೂಪಿಸುವಲ್ಲಿ ಸಾಹಿತಿ ಬಿ. ಕೃಷ್ಣ ಪೃ ಕೊಡುಗೆ ಮಹತ್ವದ್ದಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಡಾ. ಬೇ. ಸೀ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಬದಿಯಡ್ಕದ ಗಣೇಶ ಪೈ ಅವರ ನಿವಾಸದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ದಿ. ಬಿ ಕೃಷ್ಣ ಪೈ ಅವರ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಸಂಸ್ಮರಣಾ ಭಾಷಣ ಮಾಡಿ ಮಾತನಾಡಿದರು.
ನಿವೃತ್ತ ಪ್ರಾಧ್ಯಾಪಕ ಪೆÇ್ರೀ. ಎ ಶ್ರೀನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷ್ಣ ಪೈಗಳು ಅನೇಕ ಪ್ರತಿಭೆಗಳನ್ನು ಶೋಧಿಸಿ ಗೆದ್ದಿದ್ದಾರೆ. ಎಲ್ಲಾ ಕಡೆಗಳಲ್ಲಿ ಎಳೆಯ ಮಕ್ಕಳ ಕವಿ ಮನಸ್ಸುಗಳನ್ನು ಅರಳಿಸುವ ಯತ್ನಗಳು ನಡೆಯಬೇಕು. ಇದರಿಂದ ಮಕ್ಕಳ ಮಾನಸಿಕ ದೃಢತೆ ಹೆಚ್ಚುತ್ತದೆ ಎಂದು ತಿಳಿಸಿದರು. ನಿವೃತ್ತ ಉಪಜಿಲ್ಲಾಧಿಕಾರಿ ಶಶಿಧರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಖ್ಯಾತ ವೈದ್ಯ ಡಾ. ಶ್ರೀನಿಧಿ ಸರಳಾಯ, ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ ಉಪಸ್ಥಿತರಿದ್ದರು. ಪರಿಷತ್ತಿನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕ ಡಾ. ಕೆ ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ ಕೃಷ್ಣ ಪೈ ಅವರ ಭಾವಚಿತ್ರಕ್ಕೆ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಂದ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭ ಕೃಷ್ಣ ಪೈಗಳ ಪುತ್ರ ಗಣೇಶ ಪೈ ದಂಪತಿಯನ್ನು ಅಭಿನಂದಿಸಲಾಯಿತು. ಬಳಿಕ ಪತ್ರಕರ್ತ, ಸಾಹಿತಿ ವಿರಾಜ್ ಅಡೂರು ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು. ಹದಿಮೂರು ಮಂದಿ ಕವಿಗಳು ಚುಟುಕು ವಾಚನ ಮಾಡಿದರು. ಬಳಿಕ ಲಕ್ಷ್ಮಿ ಜಿ ಪೈ, ಬಿ ಉನ್ನತಿ ಪೈ ಹಾಗೂ ತೇಜಸ್ ಪೈ ಅವರಿಂದ ಗೀತೆಗಳ ಗಾಯನ ನಡೆಯಿತು. ಬಿ ಉನ್ನತಿ ಪೈ ಪ್ರಾರ್ಥನೆ ಹಾಡಿದರು. ಬದಿಯಡ್ಕ ಗಣೇಶ ಪೈ ಸ್ವಾಗತಿಸಿದರು. ಪ್ರೊ. ಲತಾ ಪ್ರಕಾಶ ರಾವ್ ನಿರೂಪಿಸಿದರು. ಶಾರದಾ ಮೊಳೆಯಾರ್ ಎಡನೀರು ವಂದಿಸಿದರು.




