ಮುಳ್ಳೇರಿಯ: ನೆಕ್ರಾಜೆ ಗ್ರಾಮದ ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಆರಂಭಗೊಂಡಿರುವ ಪುನ: ನವೀಕರಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಅಂಗವಾಗಿ ನಾಲ್ಕನೇ ದಿನವಾದ ಬುಧವಾರ ಬೆಳಿಗ್ಗೆ 6 ರಿಂದ ಗಣಪತಿಹೋಮ, ತತ್ವಕಲಶಪೂಜೆ, ತತ್ವಹೋಮ, ತತ್ವಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ಅಂಕುರಪೂಜೆ, ತ್ರಿಕಾಲಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ 7 ರಿಂದ ಅನುಜ್ಞಾಬಲಿ, ಕ್ಷೇತ್ರಪಾಲನಲ್ಲಿ ಅನುಜ್ಞಾ ಪ್ರಾರ್ಥನೆ, ಅಂಕುರಪೂಜೆ, ತ್ರಿಕಾಲಪೂಜೆ, ಬಿಂಬಶುದ್ಧಿ, ಕಲಶಪೂಜೆ, ಮಹಾಪೂಜೆ, ರಾತ್ರಿಪೂಜೆ, ಪ್ರಸಾದ ವಿತರಣೆ ನೆರವೇರಿತು.
ಭಜನಾ ಮಂಟಪದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರ ವರೆಗೆ ವಿವಿಧ ತಂಡಗಳಿಂದ ಭಜನಾ ಸಂಕೀರ್ತನ ಸೇವೆಗಳು, 6ರಿಂದ ಕುಣಿತ ಭಜನೆ ನಡೆಯಿತು. ಸಾಂಸ್ಕøತಿಕ ವೇದಿಕೆಯಲ್ಲಿ ಬೆಳಿಗ್ಗೆ 9.30 ರಿಂದ ಭಕ್ತಿಸಂಗೀತ, 11 ರಿಂದ 12.30ರ ವರೆಗೆ ಸಾಹಿತ್ಯಗಾನ-ನೃತ್ಯ ವೈಭವ, 12.35ರಿಂದ 1ರ ವರೆಗೆ ಕೈಕೊಟ್ಟಿಕಳಿ, 1.ರಿಂದ 1.45ರ ವರೆಗೆ ಶಾಸ್ತ್ರೀಯ ಸಂಗೀತ ಕಚೇರಿ, ಅಪರಾಹ್ನ 2 ರಿಂದ 4.45ರ ವರೆಗೆ ಮೂಡಂಬೈಲು ವಾಗ್ದೇವಿ ತಂಡದಿಂದ ತಾಳಮದ್ದಳೆ ಪ್ರಸ್ತುತಿಗೊಂಡಿತು. ಸಂಜೆ 5 ರಿಂದ 6.45ರ ವರೆಗೆ ಹರಿಕಥಾ ಸತ್ಸಂಗ, ಬಳಿಕ ಜಾನಪದ ನೃತ್ಯ ಮತ್ತು ರಾತ್ರಿ 9 ರಿಂದ ಮುಳ್ಳೇರಿಯ ಶ್ರೀಗಣೇಶ ಯಕ್ಷಗಾನ ಕೇಂದ್ರದವರಿಂದ ಯಕ್ಷಗಾನ ಬಯಲಾಟ ನಡೆಯಿತು.
ಇಂದಿನ ಕಾರ್ಯಕ್ರಮ:
ಇಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ತ್ರಿಕಾಲಪೂಜೆ, ಸಂಹಾರ ತತ್ವಹೋಮ, ತತ್ವಕಲಶಪೂಜೆ, ಕುಂಭೇಶ ಕರ್ಕರೀಪೂಜೆ, ಶಯ್ಯಾಪೂಜೆ, ತತ್ವಕಲಶಾಭಿಷೇಕ, ಜೀವಕಲಶಪೂಜೆ, ಜೀವೋದ್ವಾಸನೆ, ಜೀವಕಲಶ, ಸಯ್ಯೋನ್ನಯನ, ಅಂಕುರಪೂಜೆ, ಮಹಾಪೂಜೆ ನಡೆಯಲಿದೆ.ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6 ರಿಂದ ಬಿಂಬಶುದ್ಧಿ ಸಹಿತ ವಿವಿಧ ಪೂಜೆಗಳು, ರಾತ್ರಿಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಭಜನಾ ಮಂಟಪದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರ ವರೆಗೆ ವಿವಿಧ ತಂಡಗಳ ಭಜನೆ, ಸಾಂಸ್ಕøತಿಕ ವೇದಿಕೆಯಲ್ಲಿ ಬೆಳಿಗ್ಗೆ 9.30ರಿಂದ ಶಾಸ್ತ್ರೀಯ ಸಂಗೀತ ಕಚೇರಿ, ಅಪರಾಹ್ನ ಭಕ್ತಿಸಂಗೀತ, ಸಂಜೆ 5 ರಿಂದ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದೆ.
ನಾಳೆ ಪ್ರತಿಷ್ಠೆ
ಫೆ.7 ರಂದು ಶುಕ್ರವಾರ ಬೆಳಿಗ್ಗೆ 5 ರಿಂದ 108 ಕಾಯಿ ಗಣಪತಿಹೋಮ, ಪ್ರತಿಷ್ಠಾಪಾಣಿ ನಡೆದು 9.55 ರಿಂದ 10.39ರ ಮುಹೂರ್ತದಲ್ಲಿ ಶ್ರೀಉಮಾಮಹೇಶ್‍ವರ ಮತ್ತು ಪರಿವಾರ ದೇವರ ಪ್ರತಿಷ್ಠೆ ನಡೆಯಲಿದೆ. ಬಳಿಕ ಜೀವಕಲಶಾಭಿಷೇಕ, ನಿದ್ರಾಕಲಶಾಭಿಷೇಕ, ಪ್ರತಿಷ್ಠಾ ಬಲಿ, ಅಂಕುರಪೂಜೆ, ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11.ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡುವರು. ಶ್ರೀಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ ಅಧ್ಯಕ್ಷತೆ ವಹಿಸುವರು. ಮಾಯಿಪ್ಪಾಡಿ ಅರಮನೆಯ ದಾನಮಾರ್ತಾಂಡವರ್ಮರಾಜ ಯಾನೆ ರಾಮಂತರಸರು ಉಪಸ್ಥಿತರಿರುವರು. ರಾ.ಸ್ವ.ಸೇ.ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡುವರು. ವಿವಿಧ ವಲಯಗಳ ಗಣ್ಯರು ಉಪಸ್ಥಿತರಿರುವರು.




.jpg)
.jpg)
.jpg)
.jpg)
