ನವದೆಹಲಿ: ಮಣಿಪುರ ಜನಾಂಗೀಯ ಸಂಘರ್ಷದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಪಾತ್ರ ಇದೆ ಎಂದು ಹೇಳಲಾದ ಸೋರಿಕೆಯಾದ ಆಡಿಯೊ ಕ್ಲಿಪ್ ಕುರಿತ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು, ಆರು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸೂಚಿಸಿದರು. ನಂತರ ಅರ್ಜಿಯ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದರು.
ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರು, ಹಿಂಸಾಚಾರದಲ್ಲಿ ಮುಖ್ಯಮಂತ್ರಿ ಅವರ ಪಾತ್ರ ಇದೆ ಎಂಬ ಆರೋಪದ ಬಗ್ಗೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಆದೇಶಿಸಬೇಕು ಎಂದು ಕೋರಿದರು.




