ತ್ರಿಶೂರ್: 52 ವರ್ಷದ ಹಿರಿಯ ನಾಗರಿಕ ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿರುವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ವಡಕ್ಕಂಚೇರಿ ಬಳಿ ಈ ಆಘಾತಕಾರಿ ಘಟನೆ ನಡೆದಿದೆ.
ಮೃತ ಹಿರಿಯ ಪೊಲೀಸ್ ಅಧಿಕಾರಿಯನ್ನು, ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ನಿಯೋಜಿಸಲಾಗಿದ್ದ ಹಿರಿಯ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ.
ತನಿಖೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ




