HEALTH TIPS

ಅಶ್ಲೀಲ ಹೇಳಿಕೆ: ಮಹಾರಾಷ್ಟ್ರ ಸೈಬರ್ ಸೆಲ್‌ ಮುಂದೆ ಹಾಜರಾದ ರಣವೀರ್ ಅಲಹಾಬಾದಿಯಾ

ಮುಂಬೈ: 'ಇಂಡಿಯಾಸ್ ಗಾಟ್ ಲ್ಯಾಟೆಂಟ್‌' ಕಾರ್ಯಕ್ರಮದಲ್ಲಿ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣ ಸಂಬಂಧ ತಮ್ಮ ಹೇಳಿಕೆ ದಾಖಲಿಸಲು ಯೂಟ್ಯೂಬರ್‌ಗಳಾದ ರಣವೀರ್ ಅಲಹಾಬಾದಿಯಾ ಮತ್ತು ಆಶಿಶ್‌ ಚಂಚಲಾನಿ ಅವರು ಸೋಮವಾರ ಮಹಾರಾಷ್ಟ್ರ ಸೈಬರ್‌ ಸೆಲ್‌ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ಸೈಬರ್ ಸೆಲ್‌ ನೀಡಿದ ಸಮನ್ಸ್‌ಗೆ ಪ್ರತಿಕ್ರಿಯಿಸಿರುವ ಅಲಹಾಬಾದಿಯಾ ಮತ್ತು ಚಂಚಲಾನಿ ಇಂದು ಮಧ್ಯಾಹ್ನ ನವಿ ಮುಂಬೈನ ಮಹಾಪೆಯಲ್ಲಿರುವ ಅದರ ಪ್ರಧಾನ ಕಚೇರಿಗೆ ತಲುಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇಬ್ಬರ ಹೇಳಿಕೆಯನ್ನು ಸೈಬರ್ ಪೊಲೀಸ್‌ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಅಶ್ಲೀಲ ಹೇಳಿಕೆಗಳ ಕುರಿತು ಅಲಾಬಾದಿಯಾ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣಗಳ ಬಗ್ಗೆ ಮಹಾರಾಷ್ಟ್ರ ಸೈಬರ್ ಸೆಲ್‌ ತನಿಖೆ ನಡೆಸುತ್ತಿದೆ.

'ಇಂಡಿಯಾಸ್ ಗಾಟ್ ಲ್ಯಾಟೆಂಟ್‌' ಕಾರ್ಯಕ್ರಮದ ಪ್ರದರ್ಶನ ವೇಳೆ ಪೋಷಕರು ಮತ್ತು ಲೈಂಗಿಕತೆ ಬಗ್ಗೆ ಅಲಹಬಾದಿಯಾ ಹೇಳಿಕೆ ನೀಡಿದ್ದು, ಭಾರಿ ಟೀಕೆಗೆ ಕಾರಣವಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries