ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀನಿಧಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ರೇಂಜ್ ಅಬಕಾರಿ ದಳ ಅಧಿಕಾರಿ ಜನಾರ್ದನ ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಮಾದಕ ವಸ್ತು ಜಾಗೃತಿ ತರಗತಿ ನೀಡಿ, ಮಾದಕ ವಸ್ತು ಬಳಕೆಯ ದುಷ್ಪರಿಣಾಮ ಮತ್ತು ಮಾದಕ ದ್ರವ್ಯ ಬಳಕೆ, ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದರೆ ಲಭಿಸುವ ಶಿಕ್ಷೆಯ ಕುರಿತು ಮಾಹಿತಿ ನೀಡಿದರು.
ಎನ್ನೆಸ್ಸೆಸ್ ಸ್ವಯಂ ಸೇವಕಿ ಮೇಘ ಸ್ವಾಗತಿಸಿ, ದಿವ್ಯ ವಂದಿಸಿದರು. ಖದೀಜತುಲ್ ಝಿನಾನ ನಿರೂಪಿಸಿದರು. ವಿದ್ಯಾರ್ಥಿಗಳು ಮಾದಕ ದ್ರವ್ಯ ಬಳಕೆ ವಿರೋಧಿಸಿ ಪ್ರತಿಜ್ಞೆ ಸ್ವೀಕರಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಕಾರ್ಯಕ್ರಮ ಸಂಯೋಜಿಸಿದ್ದರು.

.jpg)

