HEALTH TIPS

Budget 2025: ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್‌ ಸೇವೆ

 ವದೆಹಲಿ: ದೇಶದ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಸೇರಿದಂತೆ ಸಾರ್ವಜನಿಕ ಶಿಕ್ಷಣ, ಉತ್ತಮ ಆರೋಗ್ಯಕ್ಕಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಘೋಷಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಇದಾಗಿದೆ.

ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಲು 'ಭಾರತೀಯ ಭಾಷಾ ಪುಸ್ತಕ ಯೋಜನೆ'ಯನ್ನು ಜಾರಿಗೆ ತರಲಾಗುವುದು ಎಂದು ನಿರ್ಮಲಾ ಪ್ರಕಟಿಸಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರ ಭಾಗವಾಗಿ 2025-26 ಆರ್ಥಿಕ ವರ್ಷದಲ್ಲಿ 200 ಕೇಂದ್ರಗಳನ್ನು ತೆರೆಯಲಾಗುವುದು ಎಂದು ನಿರ್ಮಲಾ ಭರವಸೆ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries