ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದ್ದು ಜನರ ಚಿತ್ತ ಮತಗಟ್ಟೆ ಸಮೀಕ್ಷೆಯತ್ತ ನೆಟ್ಟಿದೆ.
ಹಾಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೂರನೇ ಬಾರಿಗೆ ಗದ್ದುಗೆ ಏರಲು ಕಸರತ್ತು ನಡೆಸಿದೆ. ಎರಡು ದಶಕಗಳ ಬಳಿಕ ಅಧಿಕಾರ ಪಡೆಯಲು ಬಿಜೆಪಿ ಪ್ರಯಾಸಪಟ್ಟಿದೆ.
ಎರಡು ಪಕ್ಷಗಳ ಪೈಪೋಟಿಯಲ್ಲಿ ಅಧಿಕಾರಕ್ಕೇರುವ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಹೀಗಾಗಿ ದೆಹಲಿಯಲ್ಲಿನ ತ್ರಿಕೋನ ಸ್ಪರ್ಧೆಯಲ್ಲಿ ಗದ್ದುಗೆ ಯಾರ ಪಾಲಾಗಲಿದೆ ಎಂಬುದರತ್ತ ಇಡೀ ದೇಶ ಕಣ್ಣಿಟ್ಟಿದೆ.
ಮತದಾನ ಮುಕ್ತಾಯವಾದ ಕೂಡಲೇ ಮಾಧ್ಯಮ ಹಾಗೂ ಇತರೆ ಸಂಸ್ಥೆಗಳು ತಾವು ನಡೆಸಿರುವ ಮತಗಟ್ಟೆ ಸಮೀಕ್ಷೆಯನ್ನು ಬಿತ್ತರ ಮಾಡಲಿವೆ.
ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಮಾಧ್ಯಮಗಳು ಫೆ. 5ರ ಸಂಜೆ 6.30ರ ಬಳಿಕ ಮತಗಟ್ಟೆ ಸಮೀಕ್ಷೆಯ ವಿವರಗಳನ್ನು ಪ್ರಸಾರ ಮಾಡಬಹುದಾಗಿದೆ.





