ಕಾಸರಗೋಡು: ಆರರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಅಪರಾಧಿ, ವಕಡಿ ಉದ್ದಂಬೆಟ್ಟು ನಿವಸಿ ವಿಕ್ಟರ್ ಮೊಂತೆರೋ(43)ಎಂಬಾತನಿಗೆ ಕಾಸರಗೋಡು ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮುರಮೇಶ್ ಚಂದ್ರಬಾನು ಅವರು ವಿವಿಧ ಸೆಕ್ಷನ್‍ಗಳಲ್ಲಾಗಿ 133 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 4.5ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಅಪರಾಧಿ 18 ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
2021 ಸೆ. 10ಕ್ಕ ಮೊದಲು ಅಪರಾಧಿ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಕಲಿಸಿಕೊಂಡಿದ್ದರು. ಪೋಕ್ಸೋ ಅನ್ವಯ ಈತನನ್ನು ಬಂಧಿಸಲಾಗಿತ್ತು. ಮಂಜೇಶ್ವರ ಠಾಣೆ ಇನ್ಸ್‍ಪೆಕ್ಟರ್ ಎ. ಸಂತೋಷ್ ಕುಮಾರ್ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರವಾಗಿ ಪಬ್ಲಿಕ್ ಪ್ರೋಸಿಕ್ಯೂಟರ್ ಪ್ರಿಯಾ ಎ.ಕೆ ನ್ಯಾಯಾಲಯಕ್ಕೆ ಹಾಜರಾಗಿದ್ದರು.






