HEALTH TIPS

ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 320ಕ್ಕೂ ಅಧಿಕ ಮಂದಿ ಸಾವು

ಟೆಲ್ ಅವಿವ್: ಗಾಜಾ ಪಟ್ಟಿಯಾದ್ಯಂತ ಇಸ್ರೇಲ್ ಸೇನೆಯು ನಡೆಸಿರುವ ವೈಮಾನಿಕ ದಾಳಿಯಲ್ಲಿ 320ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 

ಜನವರಿಯಲ್ಲಿ ಕದನ ವಿರಾಮ ಜಾರಿಗೆ ಬಂದ ಬಳಿಕ ಹಮಾಸ್ ಗುರಿಯಾಗಿಸಿ ಇಸ್ರೇಲ್ ನಡೆಸಿರುವ ಅತಿ ದೊಡ್ಡ ದಾಳಿ ಇದಾಗಿದೆ.

ಇಸ್ರೇಲ್ ನಡೆಸಿರುವ ದಾಳಿಯಲ್ಲಿ 320ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಕದನ ವಿರಾಮ ವಿಸ್ತರಣೆಯ ಮಾತುಕತೆಯಲ್ಲಿ ಉಂಟಾದ ಪ್ರಗತಿಯ ಹಿನ್ನಡೆಯಿಂದಾಗಿ ದಾಳಿಗೆ ಆದೇಶ ನೀಡಿರುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರಣ ನೀಡಿದ್ದಾರೆ.

ಕದನ ವಿರಾಮ ಉಲ್ಲಂಘನೆ ಮಾಡಿರುವ ಇಸ್ರೇಲ್‌ಗೆ ತಕ್ಕ ಉತ್ತರ ನೀಡಲಿದ್ದೇವೆ. ಒತ್ತೆಯಾಳುಗಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿವೆ ಎಂದು ಹಮಾಸ್ ಎಚ್ಚರಿಸಿದೆ.

ಇಸ್ರೇಲ್‌ನ ಈ ದಾಳಿಯಿಂದಾಗಿ ಯುದ್ಧ ಮತ್ತೆ ಪೂರ್ಣ ಪ್ರಮಾಣಕ್ಕೆ ಮರಳುವ ಭೀತಿಯನ್ನು ಹರಡಿದೆ.

ವಿಶ್ವಸಂಸ್ಥೆ ಆಘಾತ...

ಗಾಜಾದ ಮೇಲೆ ಇಸ್ರೇಲ್ ನಡೆಸಿರುವ ದಾಳಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್ ಆಘಾತ ವ್ಯಕ್ತಪಡಿಸಿದ್ದು, ಕದನ ವಿರಾಮವನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದ್ದಾರೆ.

ಗಾಜಾದಲ್ಲಿರುವ ಜನರಿಗೆ ಮಾನವೀಯ ನೆಲೆಯಲ್ಲಿ ನೆರವು ಮುಂದುವರಿಸಬೇಕು. ಹಮಾಸ್ ಹಿಡಿದಿಟ್ಟಿರುವ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries