ಕಾಸರಗೋಡು: ಕಾಸರಗೋಡು ಜಿಲ್ಲೆಯ ಅಭಿವೃದ್ಧಿ ಪ್ಯಾಕೇಜ್‍ನಲ್ಲಿ ಸೇರಿಸಿ ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರುವ ಸೇವೆಗಳನ್ನು ಮುಂದುವರಿಸಲು ಮುಖ್ಯಮಂತ್ರಿಗಳ ನಿರ್ದೇಶನದಂತೆ 376.84 ಲಕ್ಷ ರೂ.ಗಳನ್ನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಕೆ.ಇನ್ಭಾಶೇಖರ್ ಆದೇಶ ನೀಡಿದ್ದಾರೆ.
ಎಂಡೋಸಲ್ಫಾನ್ ಸಂತ್ರ್ತರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಮೂಲಕ ನೀಡಲಾಗುತ್ತಿದ್ದ ಕೇಂದ್ರ ನೆರವು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಂತ್ರಸ್ತ ಜನರಿಗೆ ತಕ್ಷಣ ನಿರಂತರ ನೆರವು ನೀಡುವ ಉದ್ದೇಶದಿಂದ, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನ ಭಾಗವಾಗಿ ಸಂತ್ರಸ್ತ ಜನರ ಚಿಕಿತ್ಸೆ ಮತ್ತು ಇತರ ನಿರ್ವಹಣಾ ಚಟುವಟಿಕೆಗಳಿಗೆ ಹಣವನ್ನು ಹಂಚಿಕೆ ಮಾಡಲು ಮುಖ್ಯಮಂತ್ರಿಗಳು ನಿರ್ದೇಶ ನೀಡಿದ್ದಾರೆ.
ಜಿಲ್ಲೆಯ 11 ಗ್ರಾಮ ಪಂಚಾಯತ್ ಗಳಲ್ಲಿ ವಾಸಿಸುವ 6,727 ಎಂಡೋಸಲ್ಫಾನ್ ಸಂತ್ರಸ್ತರಲ್ಲಿ ಅನೇಕರು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದಾರೆ . ಆ ಕುಟುಂಬಗಳ ಆದಾಯ ಕಡಿಮೆ ಕೆಳಮಟ್ಟದ ಕುಟುಂಬಗಳಿಗೆ ಅಗತ್ಯ ಬೆಂಬಲವನ್ನು ನೀಡಲು ಸಾಧ್ಯವಾಗುತ್ತಿಲ್ಲ, ತುರ್ತು ನೆರವು ನೀಡದಿದ್ದರೆ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಚಟುವಟಿಕೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿಯನ್ನು ತಡೆಗಟ್ಟಲು ಈ ಯೋಜನೆಯನ್ನು ರೂಪಿಸಲಾಗಿದೆ.
ಈ ಯೋಜನೆಯು ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಒಳಗೊಂಡಿದೆ. ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳ ವಿತರಣೆ, ಮಾನವ ಸಂಪನ್ಮೂಲಗಳನ್ನು ಒದಗಿಸುವುದು, ಆಂಬ್ಯುಲೆನ್ಸ್ ಸೌಲಭ್ಯಗಳನ್ನು ಒದಗಿಸುವುದು, ಡಯಾಪರ್ ಗಳ ಖರೀದಿ, ಉಪಶಾಮಕ ಆರೈಕೆ ಮತ್ತು ಆರಿಸಿದ ಆಸ್ಪತ್ರೆಗಳಿಂದ ಉಚಿತ ಚಿಕಿತ್ಸೆಗಳಿಗೆ ಇದು ವಿನಿಯೋಗವಾಗಲಿದೆ. ಈ ಯೋಜನೆಯು ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗೆ ಬೆಂಬಲದ ಜೊತೆಗೆ ಸಹಾಯ ಒದಗಿಸಲಿದೆ. ಇದರೊಂದಿಗೆ, ಜಿಲ್ಲೆಯಲ್ಲಿ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿರುವ ಪಂಚಾಯತ್ ಪಾಲು ಕಡಿಮೆ ಇರುವ 19 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‍ನಿಂದ 147.22 ಲಕ್ಷ ರೂ.ಗಳ ಹೆಚ್ಚುವರಿ ಹಂಚಿಕೆಯನ್ನು ಜಿಲ್ಲಾಧಿಕಾರಿ ಇನ್ಭಾಶೇಖರ್ ಅಧ್ಯಕ್ಷತೆಯ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಜಿಲ್ಲಾ ಮಟ್ಟದ ಸಮಿತಿಯು ಮಂಜೂರು ಮಾಡಿದೆ.




