ತಿರುವನಂತಪುರಂ: ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ಘೋಷಿಸಲಾಗಿದೆ.
ತಿರುವನಂತಪುರಂ, ಪಟ್ಟಣಂತಿಟ್ಟ, ಇಡುಕ್ಕಿ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ.
ಮಳೆಯ ಎಚ್ಚರಿಕೆಯ ಕಾರಣ ಕೇರಳ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಕನ್ಯಾಕುಮಾರಿ ಕರಾವಳಿಯಲ್ಲಿ ಪ್ರಕ್ಷುಬ್ದ ಸಮುದ್ರ ವಿದ್ಯಮಾನದ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಇಂದು ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ.





