ನವದೆಹಲಿ: ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾಲಯದ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ 52.68 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ.
ಪ್ರಧಾನ ಮಂತ್ರಿ ಜನ ವಿಕಾಸ್ ಕಾರ್ಯಕರ್ಮ ಯೋಜನೆಯಡಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಈ ಮೊತ್ತವನ್ನು ಹಂಚಿಕೆ ಮಾಡಿದೆ.
ಈ ಮೊತ್ತವನ್ನು ಕ್ಯಾಂಪಸ್‍ನಲ್ಲಿ ವಿವಿಧ ಶೈಕ್ಷಣಿಕ ವಿಭಾಗಗಳಿಗೆ 5 ಅಂತಸ್ತಿನ ಶೈಕ್ಷಣಿಕ ಕಟ್ಟಡವನ್ನು ನಿರ್ಮಿಸಲು ಬಳಸಲಾಗುತ್ತದೆ. ಕೇರಳ ಬಿಜೆಪಿ ಮತ್ತು ವಿಶ್ವವಿದ್ಯಾಲಯದ ಎಬಿವಿಪಿ ಘಟಕದ ಸಕಾಲಿಕ ಮಧ್ಯಸ್ಥಿಕೆಯಿಂದ ಕೇಂದ್ರ ನಿಧಿಯನ್ನು ಹಂಚಿಕೆ ಮಾಡಲಾಯಿತು. ಎಬಿವಿಪಿ ಕಾರ್ಯಕರ್ತರು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯದ ಅಭಿವೃದ್ಧಿಯ ಕುರಿತು ಜ್ಞಾಪಕ ಪತ್ರವನ್ನು ಸಲ್ಲಿಸಿದ್ದರು.






