ಕಾಸರಗೋಡು: ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಕ್ಲಾಯಿ ಪ್ರದೇಶದಲ್ಲಿ ಚಿರತೆ ಸಂಚಾರದ ಜಾಡನ್ನು ಸ್ಥಳೀಯರು ಪತ್ತೆಹಚ್ಚಿದ್ದು, ಅರಣ್ಯಾಧಿಕಾರಿಗಳು ಇದನ್ನು ಖಚಿತಪಡಿಸಿದ್ದಾರೆ. ಸೋಮವಾರ ಪರಕ್ಲಾಯಿ ಬಲಿಪ್ಪಾರ ಪ್ರದೆಸದಲ್ಲಿ ಕಾಡುಪ್ರಾಣಿಗಳನ್ನು ತಿಂದುಹಾಕಿದ ಸ್ಥಿತಿಯಲ್ಲಿ ಪತ್ತೆಯಾಘಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿರತೆ ಪಂಜದ ಗುರುತು ಪತ್ತೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಚಿರತೆ ಪತ್ತೆಕಾರ್ಯ ಚುರುಕುಗೊಳಿಸಲಾಗಿದ್ದು, ಅರಣ್ಯಾಧಿಕಾರಿಗಳ ಜತೆ ಸ್ಥಳೀಯರೂ ಕಾಯಚರಣೆಯಲ್ಲಿ ಸಹಕರಿಸುತ್ತಿದ್ದಾರೆ.

