HEALTH TIPS

ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು-ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಚಲ್ದಾರಾದ ಕ್ರುಮ್ಹೂರ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರು ಮೊದಲು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಗಳು ತಿರುಗೇಟು ನೀಡಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries