ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಜ್ಞಾನ ದೀಪ ಧರ್ಮಸ್ಥಳ ವತಿಯಿಂದ ಎಣ್ಮಕಜೆ ಪಂಚಾಯಿತಿಯ ಕಾಟುಕುಕ್ಕೆ ಬಾಳೆಮೂಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಂಚು ಮತ್ತು ಡೆಸ್ಕ್‍ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಒಕ್ಕೂಟಗಳ ಸೇವಾ ಪ್ರತಿನಿಧಿ ಶಾರದಾ ಅವರು ಕೊಡುಗೆಗಳನ್ನು ಹಸ್ತಾಂತರಿಸಿದರು. ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಎಸ್‍ಎಂಸಿ ಅಧ್ಯಕ್ಷ ಬಾಲಕೃಷ್ಣ ಭಟ್ ಸಾಲೆ, ಎಸ್ ಎಸ್ ಜಿ ಅಧ್ಯಕ್ಷ ಬಟ್ಯ ಮಾಸ್ಟರ್, ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ರಾಜೇಶ ಬಿ ಅವರು ಸ್ವಾಗತಿಸಿದರು. ಅಧ್ಯಾಪಕ ಮಹಮ್ಮದ್ ಪೈಝಲ್ ವಂದಿಸಿದರು.






