'ಶಾಂತಿಗಾಗಿ ರಾಜತಾಂತ್ರಿಕತೆ ಇರಲಿದೆ. ನಾವೆಲ್ಲರೂ ಒಟ್ಟಾಗಿ ಇರುವುದಕ್ಕಾಗಿ, ಐರೋಪ್ಯ ಒಕ್ಕೂಟ ಹಾಗೂ ಅಮೆರಿಕದೊಂದಿಗೆ ರಾಜತಾಂತ್ರಿಕತೆ ಇರಲಿದೆ' ಎಂದು ಯು.ಕೆ ಹಾಗೂ ಐರೋಪ್ಯ ಒಕ್ಕೂಟದ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾಡಿದ ಭಾಷಣದಲ್ಲಿ ಝೆಲೆನ್‌ಸ್ಕಿ ಹೇಳಿದ್ದಾರೆ.
'ಖಂಡಿತವಾಗಿಯೂ ಅಮೆರಿಕದ ಪ್ರಾಮುಖ್ಯತೆಯ ಬಗ್ಗೆ ನಮಗೆ ಅರಿವಿದೆ. ಅಮೆರಿಕದಿಂದ ಲಭಿಸಿದ ಎಲ್ಲಾ ನೆರವುಗಳಿಗೆ ನಾನು ಆಭಾರಿಯಾಗಿದ್ದೇವೆ. ಅಮೆರಿಕಕ್ಕೆ ಕೃತಜ್ಞತೆ ಸಲ್ಲಿಸದ ಒಂದು ದಿನವೂ ಇಲ್ಲ' ಎಂದು ಅವರು ಹೇಳಿದ್ದಾರೆ.




