ಮಂಜೇಶ್ವರ: ಮಂಜೇಶ್ವರದ ವಾಮಂಜೂರಿನಲ್ಲಿ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.
ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಪ್ಯೆವಳಿಕೆ ಬಾಯಿಕಟ್ಟೆಯ ಕಿಶನ್ ಕುಮಾರ್, ಜನಾರ್ಧನ ಮತ್ತು ಅರುಣ್ ಎಂದು ಗುರುತಿಸಲಾಗಿದೆ. ಕರ್ನಾಟಕದ ಉಪ್ಪಿನಂಗಡಿ ಮೂಲದ ರತನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಸೋಮವಾರ ರಾತ್ರಿ 10.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚೆಕ್‌ಪಾಯಿಂಟ್ ಬಳಿಯ ಸೇತುವೆಯ ವಿಭಾಜಕಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ. ಮೃತದೇಹಗಳನ್ನು ಮಂಗಲ್ಪಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಕಾರಿನೊಳಗಿದ್ದ ಜನರು ಮಂಗಳೂರಿಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ.
ಕಾರು ನಿಯಂತ್ರಣ ತಪ್ಪಿ ಮೇಲ್ಸೇತುವೆಯ ಗಾರ್ಡ್‌ರೈಲ್ ಮತ್ತು ವಿಭಾಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರು ಮುಂದೆ ಚಲಿಸಿ, ಸುಮಾರು 50 ಮೀಟರ್‌ಗಳಷ್ಟು ಗಾರ್ಡ್‌ರೈಲ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಕಾರಿನ ಭಾಗಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದವು.




