HEALTH TIPS

ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾಂಜಲಿ-ಪ್ರಸಂಗದ ಜೊತೆಗೆ ಪ್ರಸಂಗ ಕರ್ತನ ಹೆಸರು ಉಲ್ಲೇಖಿಸಿವುದು ಪರಿಶ್ರಮಕ್ಕೆ ನೀಡುವ ಗೌರವ-ಡಿ.ರಾಮಣ್ಣ ಮಾಸ್ತರ್

ಮುಳ್ಳೇರಿಯ: ಯಕ್ಷಗಾನದಲ್ಲಿ ಪ್ರಸಂಗದ ಜೊತೆಗೆ ಪ್ರಸಂಗಕರ್ತರ ಹೆಸರನ್ನೂ ಹೇಳಬೇಕು. ಇದು ಕೃತಿಕಾರರರಿಗೆ ಹಾಗೂ ಅವರ ಪರಿಶ್ರಮಕ್ಕೆ  ನೀಡುವ  ಗೌರವ' ಎಂದು ನಿವೃತ್ತ ಮುಖ್ಯ ಶಿಕ್ಷಕ ಡಿ. ರಾಮಣ್ಣ ಮಾಸ್ತರ್ ಹೇಳಿದರು. 

ಅವರು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಬನಾರಿ ಕೀರಿಕ್ಕಾಡು ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಆಶ್ರಯದಲ್ಲಿ ಬನಾರಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕøತಿಕ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಆಶಯೋಜಿಸಿದ್ದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಬದುಕು- ಬರಹದ ಕುರಿತ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. 


ಯಕ್ಷಗಾನದ ಪುನಶ್ಚೇತನಕ್ಕೆ ಮಾಸ್ತರ್ ವಿಷ್ಣು ಭಟ್ಟರು ಮಹತ್ವದ ಕೊಡುಗೆ ನೀಡಿದ್ದಾರೆ.  ಊರಿನ ಜನರ ಸಾಮಾಜಿಕ, ಸಾಂಸ್ಕೃತಿಕ ಪರಿವರ್ತನೆಗೆ ನಾಂದಿ ಹಾಡಿದರು. ಅವರು ಸ್ಥಾಪಿಸಿದ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘಕ್ಕೆ ಗಾಢ ಇತಿಹಾಸ ಇದೆ. ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ವೈದ್ಯ ಸಾಹಿತಿ ಡಾ. ರಮಾನಂದ ಬನಾರಿ  ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.  ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಸಂಚಾಲಕ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕವಾಗಿ ಸಂಘಟನೆಯ ಯೋಜನೆಗಳ ಬಗ್ಗೆ  ಮಾತನಾಡಿದರು. ಈ ಸಂದರ್ಭದಲ್ಲಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆಗೈಯ್ದು ನಮನ ಸಲ್ಲಿಸಲಾಯಿತು. ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಹಾಗೂ ಡಾ. ಶಾಂತ ಪುತ್ತೂರು ಶುಭ ಹಾರೈಸಿದರು ಕಾರ್ಯಕ್ರಮದ ಸಂದರ್ಭದಲ್ಲಿ ಗೋಪಾಲಕೃಷ್ಣ ದೇವರ ಪೂಜೆ ಹಾಗೂ ಭಗವದ್ಗೀತಾ ಪಾರಾಯಣ ನಡೆಯಿತು. ಶಿಕ್ಷಕಿ ಜಲಜಾಕ್ಷಿ ರೈ ಸ್ವಾಗತಿಸಿ, ಯಮಿತಾ, ಅರ್ಚನಾ, ತೇಜಸ್ವಿ ಹಾಗೂ ಸ್ವಾತಿ ಪ್ರಾರ್ಥನೆ ಹಾಡಿದರು. ಪರಿಷತ್ತಿನ ಕೇಂದ್ರ ಸಮಿತಿ ಕಾರ್ಯದರ್ಶಿ ವಸಂತ ಕೆರೆಮನೆ ವಂದಿಸಿದರು. ಅಪೂರ್ವ ಕಾರಂತ ಪುತ್ತೂರು ನಿರೂಪಿಸಿದರು. ನಂತರ ಶಿಕ್ಷಣ ತಜ್ಞ ವಿ ಬಿ ಕುಳಮರ್ವ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.  25 ಮಂದಿ ಕವಿಗಳು ಚುಟುಕು ವಾಚನ ಮಾಡಿದರು ಈ ಸಂದರ್ಭದಲ್ಲಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ, ಅಪೂರ್ವ ಕಾರಂತ, ಆದ್ಯಂತ್ ಅಡೂರು ಹಾಗೂ ಗಿರೀಶ್ ಪೆರಿಯಡ್ಕ ಅವರಿಂದ ಭಾವಭಕ್ತಿ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಕೊಳ್ಚಪ್ಪೆ ಗೋವಿಂದ.ಭಟ್ ಮತ್ತು ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ ಆಯ್ಕೆಯಾದರು. ಅನೇಕ ಮಂದಿ ಮಕ್ಕಳು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries