ಬದಿಯಡ್ಕ: ನೀರ್ಚಾಲು ಮಾನ್ಯ ಸಮೀಪದ ಕಾರ್ಮಾರು ಶ್ರೀಮಹಾವಿಷ್ಣು ದೇವಾಲಯದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭ ಭಾನುವಾರ ಸಂಜೆ ಯಕ್ಷಮಿತ್ರರು ಮಾನ್ಯ ಇವರ ಸಂಯೋಜನೆಯಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಶ್ರೀ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಪಾವಂಜೆ ಮೇಳದ ಸಂಚಾಲಕ, ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಶ್ರೀಗಳು ಶಾಲು ಹೊದಿಸಿ, ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಬಳಿಕ ಪಾವಂಜೆ ಮೇಳದವರಿಂದ ಶ್ರೀಹರಿ ದರ್ಶನ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.




.jpg)

