ಕಾಸರಗೋಡು: ಜಿಲ್ಲಾ ವೈದ್ಯಕೀಯ ಕಚೇರಿ (ಆರೋಗ್ಯ) ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಜಂಟಿಯಾಗಿ ಜಿಲ್ಲೆಯ ಆರೋಗ್ಯ ಕೇಂದ್ರಗಳು ಮತ್ತು ಅಂಗನವಾಡಿಗಳಲ್ಲಿ ಪ್ರದರ್ಶಿಸಲು ನಿಕ್ಷಯ್ ಶಿಬಿರ-100 ದಿನಗಳ ಕ್ರಿಯಾ ಕಾರ್ಯಕ್ರಮದ ಸಂಬಂಧ ಹೊರಡಿಸಲಾದ ಕ್ಷಯರೋಗ ಜಾಗೃತಿ ಪೋಸ್ಟರ್ ನ್ನು ಕಾಸರಗೋಡು ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿ.ಬೇಬಿ ಬಾಲಕೃಷ್ಣನ್ ನಿನ್ನೆ ಬಿಡುಗಡೆಗೊಳಿಸಿದರು.
ಕಾಸರಗೋಡು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಆರೋಗ್ಯ ವ್ಯವಹಾರಗಳ ಸ್ಥಾಯಿ ಸಮಿತಿಯ ಅಧ್ಯಕ್ಷ ಅಡ್ವ. ಎಸ್.ಎನ್. ಸರಿತಾ, ಎಡಿಎಂ ಪಿ. ಅಖಿಲ್, ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಎ.ವಿ.ರಾಮದಾಸ್, ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಡಾ.ಸಚಿನ್ ಸೆಲ್ವ್, ಜಿಲ್ಲಾ ಟಿಬಿ ಅಧಿಕಾರಿ ಡಾ. ಆರತಿ ರಂಜಿತ್ ಭಾಗವಹಿಸಿದ್ದರು.






